ದಾಂಡೇಲಿ : ನಗರಕ್ಕೆ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್.ಎನ್ ಅವರು ಭೇಟಿ ನೀಡಿದರು.
ಹಳೆ ದಾಂಡೇಲಿಯಲ್ಲಿರುವ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್.ಎನ್ ಅವರು ಡಿವೈಎಸ್ಪಿ ಶಿವಾನಂದ ಕಟಗಿ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ದಾಂಡೇಲಿ ಪೊಲೀಸ್ ಉಪ ವಿಭಾಗದಲ್ಲಿ ಶಾಂತಿ ಸುವ್ಯವಸ್ಥೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ದಾಂಡೇಲಿಗೆ ಭೇಟಿ ನೀಡಿರುವುದನ್ನು ತಿಳಿದು ಆದಿ ಜಾಂಬವಂತ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಚಂದ್ರಕಾಂತ ನಡಿಗೇರ ನೇತೃತ್ವದಲ್ಲಿ ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ರಾಜೇಶ ಕಾಂಬಳೆ, ಸುನೀಲ್ ಕಾಂಬಳೆ ಮೊದಲಾದವರನ್ನೊಳಗೊಂಡ ನಿಯೋಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಭೀಮಣ್ಣ ಎಂ ಸೂರಿ, ಪೊಲೀಸ್ ಉಪನಿರೀಕ್ಷಕರಾದ ಐ.ಆರ್.ಗಡ್ಡೇಕರ್, ಯಲ್ಲಪ್ಪ.ಎಸ್ ಹಾಗೂ ಪೋಲಿಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.