ಹಳೆದಾಂಡೇಲಿಯ ಶ್ರೀ.ಗಣಪತಿ ದೇವಸ್ಥಾನದಲ್ಲಿ ಶ್ರಾವಣ ಸಂಭ್ರಮ

ದಾಂಡೇಲಿ : ನಗರದ ಹಳೆದಾಂಡೇಲಿಯಲ್ಲಿಯ ಗಾಂಧಿಚೌಕದಲ್ಲಿರುವ ಶ್ರೀ.ಗಣಪತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರಾವಣ ಸಂಭ್ರಮವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಗುತ್ತಿದೆ.

ಶ್ರೀ.ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಶ್ರೀ.ಲಕ್ಷ್ಮೀ ಪೂಜಾ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಇಂದು ಆಚರಿಸಲಾಯ್ತು. ಈ ಸಂದರ್ಭದಲ್ಲಿ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ಗಣೇಶ ಮಹಿಳಾ ಮಂಡಳದ ನೇತೃತ್ವದಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಶ್ರೀ.ಗಣಪತಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಶ್ರೀ.ಗಣೇಶ ಮಹಿಳಾ ಮಂಡಳದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.