ದಾಂಡೇಲಿ ತಾಲ್ಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಜಮಾಬಂಧಿ ಸಭೆ

ದಾಂಡೇಲಿ : ನಗರ ಸಭೆಯ ಆವರಣದಲ್ಲಿರುವ ತಾಲ್ಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಆಡಳಿತ ಅಧಿಕಾರಿಯಾಗಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ನಾವಿ ಅವರ ಅಧ್ಯಕ್ಷತೆಯಲ್ಲಿ ಜಮಾಬಂಧಿ ಸಭೆಯನ್ನು ಇಂದು ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ಇಲಾಖಾವಾರು ಪ್ರಗತಿಯ ವರದಿಯ ಬಗ್ಗೆ ಪರಿಶೀಲನೆಯನ್ನು ನಡೆಸಲಾಯಿತು. ತಾಲೂಕಿನ ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆಯನ್ನು ನಡೆಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ ಹಾಲಮ್ಮನವರ, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ, ತೋಟಗಾರಿಕೆ ಇಲಾಖೆಯ ನಿಂಗಪ್ಪ, ಲೋಕೋಪಯೋಗಿ ಇಲಾಖೆಯ ಶಿವರಾಯ, ಸಮಾಜ ಕಲ್ಯಾಣ ಇಲಾಖೆಯ ದರ್ಶನ್, ಉಪ ವಲಯಾರಣ್ಯಾಧಿಕಾರಿಗಳಾದ ಅರುಣ್ ಮತ್ತು ರಾಮು ಗೌಡ, ಕೃಷಿ ಇಲಾಖೆಯ ರಾಮಕೃಷ್ಣ, ತಹಶೀಲ್ದಾರ್ ಕಚೇರಿಯ ಮುಕುಂದ ಬಸವಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

ಸಭೆಯ ಆರಂಭದಲ್ಲಿ ಪ್ರಕಾಶ್ ಹಾಲಮ್ಮನವರ ಸ್ವಾಗತಿಸಿದರು, ಕೋಗಿಲಬನ/ ಬಡಕಾನಶಿರಡಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಮಡಿವಾಳ ವಂದಿಸಿದರು. ತಾಲೂಕ್ ಪಂಚಾಯಿತಿಯ ಕವಿತಾ ಜೋಗಳೆಕರ್ ಸಹಕರಿಸಿದರು.