ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಮಂಗಳವಾರ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಅಧಿಕಾರಿಗಳು, ಎಲ್ಲ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಮಂಕಿಪಾಕ್ಸ್ ಸೋಂಕಿನ ಕುರಿತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.