ಕಾರವಾರ: ಆಗಸ್ಟ್ 16 ಅಥವಾ 17 ರಂದು ಉತ್ತರ ಕನ್ನಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸುವ ನಿರೀಕ್ಷೆ ಇದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಉತ್ತರಕನ್ನಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ರೂಪಾಲಿ ಎಸ್. ನಾಯ್ಕ, ದಿನಕರ ಶೆಟ್ಟಿ, ಸುನೀಲ್ ನಾಯ್ಕ, ವಿ.ಎಸ್.ಪಾಟೀಲ್, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ ಉಪಸ್ಥಿತರಿದ್ದರು.