ಜೋಯಿಡಾ : ಜಿ.ಪಂ ಉತ್ತರ ಕನ್ನಡ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ನಂದಿಗದ್ದೆ, ಸಮೂಹ ಸಂಪನ್ಮೂಲ ಕೇಂದ್ರ ಜೋಯಿಡಾ, ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ನಂದಿಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ನಂದಿಗದ್ದೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಇಂದು ಶುಕ್ರವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಂದಿಗದ್ದೆ ಗ್ರಾಮ ಪಂಚಾಯತ ಅಧ್ಯಕ್ಷರಾದ ಅರುಣ ರಾಮಕೃಷ್ಣ ದೇಸಾಯಿ ಅವರು ಕೇವಲ ಸರ್ಕಾರದ ಆದೇಶ ಪಾಲನೆಗಷ್ಟೇ ಇಂತಹ ಕಾರ್ಯಕ್ರಮ ಸೀಮಿತವಾಗಿರದೇ ಮಕ್ಕಳಲ್ಲಿ ನಿಜವಾಗಿಯೂ ಅಡಗಿರುವ ಪ್ರತಿಭೆಯ ಅನ್ವೇಷಣೆಯಾಗಬೇಕು ಹಾಗೆಯೇ ಮಕ್ಕಳು ಕೂಡ ಓದಿನ ಜೊತೆಗೆ ಇಂತಹ ಚಟುವಟಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಆಸ್ವಾದಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದಾಕ್ಷಾಯಣಿ ಹನುಮಂತ ದಾನಶೂರ, ಗ್ರಾ ಪo ಸದ್ಯಸ್ಯರುಗಳಾದ ಧವಳೋ ಗಣೇಶ ಸಾವರ್ಕರ್, ಶೋಭಾ ಎಲ್ಲೇಕರ್,ಸುಕನ್ಯಾ ದೇಸಾಯಿ, ಸೀತಾ ದಾನಗೇರಿ, ಎಸ್ ಉಪಾದ್ಯ, ಜೋಸೆಫ್ ಮೊದಲಾದವರು ಭಾಗವಹಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ಭಾಗ್ವತ್ ವಹಿಸಿದ್ದರು.
ಮುಖ್ಯೋಪಾಧ್ಯಾಯರಾದ ಜನಾರ್ಧನ ಹೆಗಡೆ ಸ್ವಾಗತಿಸಿದರು. ಸಿ.ಆರ್.ಪಿ ಭಾಸ್ಕರ ಗಾoವಕರ್ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಶಿಕ್ಷಕಿ ಶೋಭಾ ವಂದಿಸಿದರು. ಶಿಕ್ಷಕರಾದ ಹನುಮಂತಕ್ಕೆ ಮತ್ತು ಭುವನೇಶ್ವರ ಮೆಸ್ತಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.