ದಾಂಡೇಲಿಯ ಶ್ರೀ.ರಾಘವೇಂದ್ರ ಮಠದಲ್ಲಿ ಶ್ರದ್ಧಾಭಕ್ತಿಯಿಂದ 352ನೇ ಆರಾಧನಾ ಮಹೋತ್ಸವ

ದಾಂಡೇಲಿ : ನಗರದ ಟೌನಶಿಪ್ ನಲ್ಲಿರುವ ಶ್ರೀ.ರಾಘವೇಂದ್ರ ಮಠದಲ್ಲಿ ಶ್ರೀ.ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ.

ಮೂರು ದಿನಗಳವರೆಗೆ ನಡೆಯಲಿರುವ ಶ್ರೀ.ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಗುರುವಾರ ಆರಂಭಗೊಂಡಿದ್ದು, ಇಂದು ಶುಕ್ರವಾರ ವಿವಿಧ ಪೂಜಾರಾಧನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಶನಿವಾರ ಆರಾಧನಾ ಮಹೋತ್ಸವ ಸಂಪನ್ನಗೊಳ್ಳಲಿದೆ. ಇಂದು ಬೆಳಿಗ್ಗೆಯಿಂದಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಶ್ರೀ.ಸನ್ನಿಧಿಗೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂಜೆ ಮಹಿಳೆಯರಿಂದ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆರಾಧನಾ ಮಹೋತ್ಸವದ ಯಶಸ್ಸಿಗೆ ಶ್ರೀ.ರಾಘವೇಂದ್ರ ಮಠದ ಆಡಳಿತ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಶ್ರಮಿಸುತ್ತಿದ್ದಾರೆ.