ಸುಳ್ಯ: ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ₹5 ಲಕ್ಷದ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಮುಂತಾದವರಿದ್ದರು.