ದಾಂಡೇಲಿ : ನಗರದ ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಇಂದು ಭಾನುವಾರ ಬೆಳಿಗ್ಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.
ಗಾಂಧಿನಗರದ ಆಶ್ರಯ ಕಾಲೋನಿಯ ನಿವಾಸಿ 25 ವರ್ಷ ವಯಸ್ಸಿನ ಕೃಷ್ಣ ಬಾಬನಿ ಕಂಜರಭಾಟ್ ಎಂಬತಾನೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವ್ಯಿಯಾಗಿದ್ದಾನೆ. ಈತನು ವಿಪರೀತ ಕುಡಿತದ ಚಟವನ್ನು ಹೊಂದಿದ್ದನು ಎನ್ನಲಾಗಿದ್ದು, ಈತ ಆಶ್ರಯ ಕಾಲೋನಿಯಲ್ಲಿರುವ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಈ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ