ದಾಂಡೇಲಿಯ ಶಿಕ್ಷಕಿ ಶೋಭಾ ಎಸ್.ಕಡೋಳ್ಕರ್ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಯ ಗೌರವ

ದಾಂಡೇಲಿ : ನಗರದ ಹಳೆ ದಾಂಡೇಲಿಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯ ಸಹ ಶಿಕ್ಷಕಿಯಾಗಿರುವ ಶೋಭಾ ಕಡೋಳ್ಕರ್ ಅವರನ್ನು ಈ ಬಾರಿಯ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಳೆದ 25 ವರ್ಷಗಳಿಂದ ಶಿಕ್ಷಕಿಯಾಗಿ ವಿವಿಧ ಶಾಲೆಗಳಲ್ಲಿ ಸೇವೆಯನ್ನು ಸಲ್ಲಿಸಿ ಕಳೆದ ಎಂಟು ವರ್ಷಗಳಿಂದ ಹಳೆ ದಾಂಡೇಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ಶೈಕ್ಷಣಿಕ ಕಾಳಜಿಯನ್ನು ಪರಿಗಣಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಶೋಭಾ ಕಡಳ್ಕೋರ್ ಅವರನ್ನು ನಗರದ ಗಣ್ಯಾರನೇಕರು ಅಭಿನಂದಿಸಿದ್ದಾರೆ.