ಸಿದ್ದಾಪುರ : 2022 -23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಹಾಗೂ ತೃತೀಯ ಭಾಷೆ ಸಂಸ್ಕೃತದಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ ಸಂಸ್ಕೃತ ಶಿಕ್ಷಕರ ಸಂಘ ಸಿರ್ಸಿ ಘಟಕ ಇವರ ವತಿಯಿಂದ ಪಟ್ಟಣದ ಶಂಕರ ಮಠದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಕ್ಷೇತ್ರಶಿಕ್ಷಣಾಧಿಕಾರಿ ಜಿ ಐ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಕರ ಮಠದ ಧರ್ಮಾಧಿಕಾರಿ ವಿಜಯಹೆಗಡೆದೊಡ್ಮನೆ ವಹಿಸಿದ್ದರು.ಸುಮಾರು 160 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.