ಜೋಯಿಡಾ : ತಾಲೂಕು ಕೇಂದ್ರದಲ್ಲಿರುವ ನ್ಯೂ ಟೌನ್ಶಿಪ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೆಂಕಟಮ್ಮ ಗಾಂವಕರ್ ಅವರು ಈ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ 35 ವರ್ಷಗಳಿಂದ ಶಿಕ್ಷಕಿಯಾಗಿ ಅನುಪಮ ಸೇವೆಯನ್ನು ಸಲ್ಲಿಸುತ್ತಿರುವ ವೆಂಕಮ್ಮ ಗಾಂವಕರ್ ಅವರು ಮುಖ್ಯೋಪಾಧ್ಯಾಯರಾಗಿ ಪದೋನ್ನತಿಗೊಂಡು ಜೋಯಿಡಾದ ನ್ಯೂ ಟೌನ್ ಶಿಪ್ ನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದಾರೆ.