ದಾಂಡೇಲಿ : ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಇಂದು ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಗೌರವಾರ್ಪಣೆಯನ್ನು ಸಲ್ಲಿಸುವುದರ ಜೊತೆಗೆ ಶಾಲೆಯ ಎಲ್ಲಾ ಶಿಕ್ಷಕ ವೃಂದದವರಿಗೆ ವಿದ್ಯಾರ್ಥಿಗಳು ಗುರು ನಮನವನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ನಾಡು, ನುಡಿ, ಸಂಸ್ಕೃತಿಯನ್ನು ಗೌರವಿಸುವ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಕ್ಲಾರೆಟ್, ಶಾಲಾ ಅಧೀಕ್ಷಕಿ ಸಿಸ್ಟರ್ ವೀಣಾ, ಶಾಲಾ ಶಿಕ್ಷಕ ವೃಂದವರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರು ಭಾಗವಹಿಸಿದ್ದರು.