ಕಾರವಾರ: ಜಿಲ್ಲೆಯ ಹೃದಯ ಭಾಗದಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಆಸ್ಪತ್ರೆ ನಿರ್ಮಾಣಕ್ಕೆ ಎಲ್ಲ ಶಾಸಕರು ಸಹಮತ ಸೂಚಿಸಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಗಳನ್ನು ವೀಕ್ಷಿಸಿದ್ದಾರೆ ಎಂದು ತಿಳಿಸಿದರು.
ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅವಶ್ಯಕವಾಗಿದೆ. ಎಲ್ಲೇ ನಿರ್ಮಾಣವಾದರೂ ಬೇಗ ನಿರ್ಮಾಣವಾಗಬೇಕು. ಈಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ತ್ವರಿತವಾಗಿ ಕಟ್ಟಡ ಕಾರ್ಯ ಪೂರ್ಣಗೊಳಿಸಲು ಕ್ರಮವಾಗಬೇಕು ಎಂದರು. ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದಯ ಸಂಬಂಧಿ ಚಿಕಿತ್ಸೆ ಸೇರಿದಂತೆ ಇನ್ನಿತರ ಸೇವೆಗಳು ಲಭ್ಯವಾಗಲಿದೆ. ಹಾಗೂ 450 ಹಾಸಿಗೆ ಆಸ್ಪತ್ರೆ ಒಳಗೊಂಡಿದೆ ಎಂದು ಹೇಳಿದರು.
ಶಾಸಕ ದಿನಕರ ಶೆಟ್ಟಿ ಮಾತನಾಡಿ, ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣವಾದರೆ ಎಲ್ಲ ಶಾಸಕರ ಸಹಮತವಿದೆ ಈಗಾಗಲೇ ಜಾಗವನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದ್ದಾರೆ ಎಂದರು.
ಶಾಸಕ ಸುನೀಲ್ ನಾಯ್ಕ, ವಿ.ಎಸ್.ಪಾಟೀಲ್, ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ ಉಪಸ್ಥಿತರಿದ್ದರು