ಸಿದ್ದಾಪುರ: ತಾಲೂಕಿನ ಸೊವಿನಕೊಪ್ಪ ಹಾಗೂ ಕ್ಯಾದಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 14 ಗ್ರಾಮಗಳ ವ್ಯಾಪ್ತಿಯ ರೈತರ ಜೀವನಾಡಿಯಾಗಿರುವ ಕ್ಯಾದಗಿ ವ್ಯವಸಾಯ ಸೇವಾ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 29.97 ಲಕ್ಷ ರು ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಹಾದ್ರಿಮನೆ ತಿಳಿಸಿದ್ದಾರೆ.
ಈ ಕುರಿತು ಸಭೆ ನಡೆಸಿ ಪ್ರಕಟಣೆ ನೀಡಿ, 1976 ರಲ್ಲಿ ಸ್ಥಾಪನೆಯಾದ ಕ್ಯಾದಗಿ ಸೊಸೈಟಿ ಅನೇಕ ಏಳುಬೀಳುಗಳ ನಡುವೆ 46 ವಸಂತಗಳನ್ನು ಪೂರೈಸಿ 47ನೇ ವರ್ಷಕ್ಕೆ ಕಾಲಿಟ್ಟಿದೆ. ಸದಸ್ಯರ ಅನುಕೂಲಕ್ಕೆ ಅನುಗುಣವಾಗಿ ಸಂಘವು ಸಾಲ ನೀಡುತ್ತಿದೆ. ಮೃತಪಟ್ಟಾಗ ಸಂಘದ ನಿರ್ದೇಶಕರು ಕುಟುಂಬಸ್ಥರಿಗೆ ಸಾಂತ್ವನ ಹೇಳಿ 10 ಸಾವಿರ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಜತೆಗೆ ಭವಿಷ್ಯದ ದೃಷ್ಟಿಯಿಂದ ಸಂಘದ ಮೇಲ್ಚಾವಣಿ ಹಾಗೂ ವೇದಿಕೆ ನಿರ್ಮಿಸಲಾಗಿದೆ. ಸೂಪರ್ ಮಾರ್ಕೆಟ್ ಸ್ಥಾಪನೆಗೆ ಚಿಂತನೆ ನಡೆಸಿದಂತೆ ಈಗಾಗಲೇ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದರು. ಸಂಘದ ಎಲ್ಲ ನಿರ್ದೇಶಕರುಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.