ಸಿದ್ದಾಪುರ : ಮಳೆ ಕಡಿಮೆಯಾದ್ದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಬರಗಾಲದ ಛಾಯೆ ಆವರಿಸಿದೆ.-ವಿಶ್ವೇಶ್ವರ ಹೆಗಡೆ ಕಾಗೇರಿ

ಸಿದ್ದಾಪುರ : ತಾಲ್ಲೂಕಿನಲ್ಲಿ ಮಳೆ ಕಡಿಮೆಯಾದ್ದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಬರಗಾಲದ ಛಾಯೆ ಆವರಿಸಿದೆ. ಸರ್ಕಾರ ತಕ್ಷಣ ತಾಲ್ಲೂಕನ್ನು ಬರಗಾಲ ಪೀಡಿತ ಎಂದು ಪರಿಗಣಿಸಿ ಬರಗಾಲದ ಪರಿಹಾರ ಮತ್ತು ಸವಲತ್ತುಗಳನ್ನು ಕೃಷಿಕರಿಗೆ ನೀಡಬೇಕು ಎಂದು ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಪಟ್ಟಣದ ರಾಘವೇಂದ್ರ ಮಠದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಗುರುವಾರ ಮಾತನಾಡಿದರು.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮಂಜೂರಾದ ಎಲ್ಲಾ ಕಾಮಗಾರಿಗಳನ್ನು ಮತ್ತು ಬಡವರಿಗೆ ಮಂಜೂರಾದ ಮನೆಗಳನ್ನು ನೀಡಲು ಸರ್ಕಾರ ಮುಂದಾಗಬೇಕು. ಸ್ಟಾಲಿನ್ ಮತ್ತು ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡುವವರ ವಿರುದ್ಧ  ಕಾನೂನು ಕ್ರಮವನ್ನು ಜರುಗಿಸಿ, ರಾಜ್ಯಪಾಲರು ಸ್ಟಾಲಿನ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಮತ್ತು ಮಿತ್ರ ಪಕ್ಷಗಳು ಸ್ಟಾಲಿನ್ ಹೇಳಿಕೆಯ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು.
ಪಂಡಿತ ದೀನ ದಯಾಳ್ ಟ್ರಸ್ಟ್ ನಿಂದ ಅ. 2 ರ ಗಾಂಧೀ ಜಯಂತಿಯಂದು  ಸ್ವಚ್ಛ ಭಾರತ ಅಭಿಯಾನದ ಅಡಿ ಸ್ವಚ್ಛತೆಗಾಗಿ ಒಂದು ಹೆಜ್ಜೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅ, 2ರ ಬೆಳಿಗ್ಗೆ 9ರಿಂದ 11 ಗಂಟೆಯವರೆಗೆ ಪಂಚಾಯಿತಿ ಮತ್ತು ಪಟ್ಟಣ ವ್ಯಾಪ್ತಿಗಳಲ್ಲಿ ಆಸಕ್ತರನ್ನು ಒಗ್ಗೂಡಿಸಿಕೊಂಡು ಸ್ವಚ್ಛತೆಯನ್ನು ಕೈಗೊಳ್ಳಲಾಗುವುದು. ಇದು ಕೇವಲ ಕಾರ್ಯಕ್ರಮವಾಗಿರದೆ ಒಂದು ಜನಾಂಗೋಲನವಾಗಬೇಕು ಎಂದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು