ದಾಂಡೇಲಿ : ತಾಲೂಕಿನ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಕೆಸುವಂತೆ ಆಗ್ರಹಿಸಿ ದಾಂಡೇಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ನಗರದ ಅಂಬೆವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ಇಂದು ಶುಕ್ರವಾರ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ ತಾಲೂಕಿನ ರೈತರ ವಿವಿಧ ಬೇಡಿಕೆಗಳಾದ ದಾಂಡೇಲಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕೆಂದು ಘೋಷಣೆ ಮಾಡಬೇಕು, ತಾಲ್ಲೂಕಿನ ರೈತರ ಸಾಲ ಮನ್ನಾ ಮಾಡಬೇಕು, ಕೃಚಿ ಬೆಳೆಗಳ ಮೇಲಾಗುತ್ತಿರುವ ಕಾಡು ಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವುದು ಹಾಗೂ ಬೆಳೆ ಹಾನಿ ಪರಿಹಾರ ಬಿಡುಗಡೆ, ಹಳಿಯಾಳದ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬಿಗೆ ಬೆಂಬಲ ಬೆಲೆ ಹಾಗೂ ಕಳೆದ ವರ್ಷ ರಾಜ್ಯ ಸರ್ಕಾರ ನಿರ್ಧರಿಸಿದ ಬಾಕಿ ಹಣ ನೀಡಲು ಆದೇಶ ನೀಡುವುದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಪಕ್ಷದ ದಾಂಡೇಲಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಚಂದ್ರಕಾಂತ ಕ್ಷೀರಸಾಗರ, ಪ್ರಧಾನ ಕಾರ್ಯದರ್ಶಿಗಳಾದ ಗುರು ಮಠಪತಿ ಮತ್ತು ಗಿರೀಶ್ ಟೊಸೂರ, ರೈತ ಮೊರ್ಚಾದ ಅದ್ಯಕ್ಷ ರವಿ ವಾಟ್ಲೇಕರ, ಅಂಬಿಕಾನಗರದ ಗ್ರಾಮ ಪಂಚಾಯತಿ ಅಧ್ಯಕ್ಷೆ ಮೇಘಾ ಗೌಡಾ, ಪಕ್ಷದ ಪ್ರಮುಖರಾದ ಸುಭಾಷ್ ಅರ್ವೇಕರ್, ನಗರಸಭಾ ಸದಸ್ಯರುಗಳಾದ ಪದ್ಮಜಾ ಜನ್ನು, ವಿಜಯ ಕೊಲೆಕರ್, ಶೋಭಾ ಜಾದವ್, ಅನ್ನಪೂರ್ಣ ಬಾಗಲಕೋಟ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.