ಯಲ್ಲಾಪುರ: ದೇಹವನ್ನು ದಂಡಿಸಿದರೆ ಆರೋಗ್ಯವಂತ ಶರೀರ ನಮ್ಮದಾಗುತ್ತದೆ. ಅದಕ್ಕೆ ಕ್ರೀಡೆ ಉತ್ತಮ ಮಾಧ್ಯಮ ಎಂದು ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.
ಅವರು ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾ.ಪಂ, ಪ.ಪಂ, ತಾಲೂಕು ಯುವ ಒಕ್ಕೂಟಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜೇಯ ನಾಯಕ, ಜಿಲ್ಲಾ ಕಬ್ಬಡ್ಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿ ವಿಠ್ಠು ಶೆಳಕೆ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ ಆಗೇರ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ವೆಂಕಟೇಶ ಪಾಲನಕರ್, ಯುವಜನ ಸೇವಾ ಕ್ರೀಡಾಧಿಕಾರಿ ನಾರಾಯಣ ನಾಯಕ, ಪತ್ರಕರ್ತರಾದ ಸುಬ್ರಾಯ ಬಿದ್ರೆಮನೆ, ನಾಗರಾಜ ಮದ್ಗುಣಿ, ಶ್ರೀಧರ ಅಣಲಗಾರ ಇತರರಿದ್ದರು. ವಿನೋದ ನಾಯಕ, ಸದಾನಂದ ನಾಯಕ, ಗಣಪತಿ ಗೌಡ ನಿರ್ವಹಿಸಿದರು.