ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಾನ್ಯ ದಿನಕರ ಶೆಟ್ಟಿಯವರು ಹೊನ್ನಾವರದ ತಾಲೂಕಾಸ್ಪತ್ರೆಗೆ ಭೇಟಿನೀಡಿ ಅಲ್ಲಿ ಸಿಗುತ್ತಿರುವ ವೈದ್ಯಕೀಯ ಸೇವೆಯ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.
ಐ. ಸಿ. ಯು. ಘಟಕಕ್ಕೆ ಭೇಟಿ ನೀಡಿದ ಶಾಸಕರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಮಾತನಾಡಿಸಿ ಯೋಗಕ್ಷೇಮ ವಿಚಾರಿಸಿದರು. ಉತ್ತಮ ವೈದ್ಯರನ್ನು ಹಾಗೂ ವೈದ್ಯಕೀಯ ವ್ಯವಸ್ಥೆಯನ್ನು ಹೊಂದಿರುವ ಹೊನ್ನಾವರ ತಾಲೂಕಾಸ್ಪತ್ರೆಯ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೊನ್ನಾವರ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ರಾಜೇಶ್ ಕಿಣಿ, ಹೊನ್ನಾವರ ಮಂಡಲ ಬಿಜೆಪಿ ಅಧ್ಯಕ್ಷ ರಾಜು ಭಂಡಾರಿ, ಪ. ಪಂ. ಸ್ಥಾಯಿಸಮಿತಿ ಅಧ್ಯಕ್ಷ ವಿಶ್ವನಾಥ ಗೊಂಡ, ಪ. ಪಂ. ಸದಸ್ಯರು ಈ ಸಮಯದಲ್ಲಿ ಹಾಜರಿದ್ದರು.