ಅಂಬೇವಾಡಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ದಾಂಡೇಲಿ : ತಾಲ್ಲೂಕಿನ ಅಂಬೇವಾಡಿಯ ನವಗ್ರಾಮದ ಸ.ಹಿ.ಪ್ರಾ.ಶಾಲೆಯಲ್ಲಿ ಹಿ.ಪ್ರಾಥಮಿಕ ಶಾಲಾ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಅಂಬೇವಾಡಿ ಗ್ರಾ.ಪಂ ಅಧ್ಯಕ್ಷರಾದ ಪ್ರಕಾಶ್.ಜಿ.ಈ ಅವರು ಉದ್ಘಾಟಿಸಿ ಶುಭ ಹಾರೈಸಿ ಮಾತನಾಡುತ್ತಾ, ಪ್ರತಿಭಾ ಕಾರಂಜಿಯ ಮೂಲಕ ಮಕ್ಕಳ ಪ್ರತಿಭೆಗಳಿಗೆ ಉಜ್ವಲ ಭವಿಷ್ಯ ನಿರ್ಮಾಣವಾಗಲೆಂದು ಶುಭವನ್ನು ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪತ್ರಕರ್ತ ಸಂದೇಶ್.ಎಸ್.ಜೈನ್ ಅವರು ಮಾತನಾಡಿ ಪ್ರತಿಯೊಂದು ಮಗುವಿನಲ್ಲಿಯೂ ತನ್ನದೇ ಆದ ರೀತಿಯಲ್ಲಿ ಪ್ರತಿಭೆಯಿದೆ. ಆ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯ ಮಗುವಿನ ಪಾಲಕರು ಮತ್ತು ಶಿಕ್ಷರದ್ದಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಮಹತ್ವಪೂರ್ಣವಾದ ವೇದಿಕೆಯಾಗಿದೆೆ ಎಂದರು.

ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಾನು ಪಂಗಡೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಕಸ್ತೂರಿ ಗೋವಿಂದಗೋಳ, ಗ್ರಾ.ಪಂ ಸದಸ್ಯರುಗಳಾದ ವಸಂತ ಗಾವಾಡೆ, ನಾಗುಬಾಯಿ ಪಂಗಡೆ, ಮಳು ಡುಯಿಪೂಡೆ, ಮುಖ್ಯೋಪಾಧ್ಯಯಿನಿ ಕಮಲಾ.ಪಿ.ನಾಯ್ಕ, ರಾಜ್ಯ ಸರಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ನಾಯಕ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ನಾಯ್ಕ, ಶಿಕ್ಷಕರ ಸಂಘದ ಪದಾಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯೋಪಾಧ್ಯಯರು, ಮುಖ್ಯ ಶಿಕ್ಷಕಿಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಂಬೇವಾಡಿ ಗ್ರಾ.ಪಂ ಅಧ್ಯಕ್ಷರಾದ ಪ್ರಕಾಶ್.ಜಿ.ಈಅವರನ್ನು ಸನ್ಮಾನಿಸಲಾಯ್ತು. ಶಿಕ್ಷಕಿ ಗೌರಿ ಗೌಡ ಅವರು ಸ್ವಾಗತಿಸಿದ ಕಾರ್ಯಕ್ರಮಕ್ಕೆ ಸಿ.ಆರ್.ಪಿ ಲಲಿತಾ ನಾಯ್ಕ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಪ್ರತಿಭಾ ಕಾರಂಜಿಯಲ್ಲಿ ಒಟ್ಟು 16 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.