ದಾಂಡೇಲಿ ತಾಲ್ಲೂಕಿನ ನಾನಾಕೆಸರೋಡಾದಲ್ಲಿ ದ್ವಿಚಕ್ರ ವಾಹನ ಮತ್ತು ಕಾರು ಡಿಕ್ಕಿ : ಓರ್ವ ಗಂಭೀರ

ದಾಂಡೇಲಿ : ಬೆಳಗಾವಿಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಮತ್ತು ದಾಂಡೇಲಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಕಾರೊಂದು ಪರಸ್ಪರ ಡಿಕ್ಕಿಯಾಗಿ ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಮಡ ಘಟನೆ ಶನಿವಾರ ಸಂಜೆ ನಡೆದಿದೆ.

ಬೆಳಗಾವಿಯಿಂದ ದಾಂಡೇಲಿಗೆ ಕೆಎ:22, ಇ: 2488 ಸಂಖ್ಯೆಯ ದ್ವಿಚಕ್ರ ವಾಹನ ಹಾಗೂ ದಾಂಡೇಲಿ ಕಡೆಯಿಂದ ಬೆಳಗಾವಿಗೆ ಹೋಗುತ್ತಿದ್ದ ಕೆಎ:19, ಎಂ.ಎ: 3898 ಸಂಖ್ಯೆಯ ಕಾರೊಂದು ನಾನಾಕೆಸರೋಡಾ ಎಂಬಲ್ಲಿ ಪರಸ್ಪರ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಬೆಳಗಾವಿಯ ಶಕೀಲ್ ತೋರ್ಗಲ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಈತನ ಕಾಲಿಗೆ ಬಲವಾದ ಹೊಡೆತ ಬಿದ್ದಿದ್ದು, ತಕ್ಷಣವೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿ, ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ವಿಜಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಸ್ಥಳಕ್ಕೆ ಮತ್ತು ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.