ಹಳಿಯಾಳ : ಸಣ್ಣ ನೀರಾವರಿ ಇಲಾಖೆಯ ಆಶ್ರಯದಡಿ ಪಶ್ಚಿಮ ವಾಹಿನಿಯ ಅನುದಾನದಡಿಯಲ್ಲಿ ಮಂಜೂರುಗೊಂಡು ಹಳಿಯಾಳ ತಾಲೂಕಿನ ಮದ್ನಳ್ಳಿ ಗ್ರಾಮದಲ್ಲಿ 150.00 ಲಕ್ಷ ರೂ.ಗಳಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಬಾಂದಾರನ್ನು ಶಾಸಕರಾದ ಆರ್.ವಿ.ದೇಶಪಾಂಡೆಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆ ಅವರು ಈ ಭಾಗದಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣವಾಗಿರುವುದು ಸ್ಥಳಿಯ ಗ್ರಾಮಸ್ಥರಿಗೆ ಬಹಳಷ್ಟು ಅನುಕೂಲವಾಗಲಿದೆ. ಇದರ ಲಾಭವನ್ನು ಸ್ಥಳೀಯ ರೈತರು ಪಡೆದುಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಉಪಾಧ್ಯಕ್ಷರಾದ ಸಂತೋಷ್ ರೇಣುಕೆ, ಸ್ಥಳೀಯ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಇತರ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.