ಸಿದ್ದಾಪುರ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಹೇಮಾವತಿ ಗೌಡರ್ ಚಾಲನೆ

ಸಿದ್ದಾಪುರ: ಎಂ.ಜಿ.ಸಿ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಿದ್ದಾಪುರ ತಾಲೂಕಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಕೋಲಶಿರ್ಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹೇಮಾವತಿ ಗೌಡರ್ ಚಾಲನೆ ನೀಡಿದರು.
ಯೋಗಥಾನ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ಸಮರ್ಥ ನಾಯ್ಕ, ಗುಂಡು ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸ್ವಪ್ನಾ ಮಡಿವಾಳ ಹಾಗೂ ನಿವೃತ್ತ ದೈಹಿಕ ಶಿಕ್ಷಕ ಡಿ.ಬಿ.ನಾಯ್ಕ ಇವರನ್ನು ಇಲಾಖೆಯ ಪರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಹಾಗೂ ಕೋಲಶಿರ್ಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹೇಮಾವತಿ ಗೌಡರ್ ಸನ್ಮಾನಿಸಿದರು.