ಜೋಯಿಡಾ; ತಾಲೂಕಾ ಕೇಂದ್ರದಲ್ಲಿರುವ ಜೋಯಿಡಾ ಸೇವಾ ಸಹಕಾರಿ ಸಂಘದಲ್ಲಿ ರೂ: 8 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜೋಯಿಡಾ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಂಘದ ಮುಖ್ಯ ಕಾರ್ಯನಿರ್ವಾಹಕ ರಾಮ ನಾಯ್ಕ ಈತ ಬುಧವಾರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.
ದಾಂಡೇಲಿ ಸಿವಿಲ್ ನ್ಯಾಯಾಲಯಕ್ಕೆ ಈತನ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗಿ ಬುಧವಾರ ರಾಮ ನಾಯ್ಕ ಈತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.