ಯಲ್ಲಾಪುರ:ಮಕ್ಕಳ ಮನಸ್ಸಿನ ವಿಕಾಸ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಿಂದ ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಹೇಳಿದರು.
ಅವರು ತಾಲೂಕಿನ ದೇಹಳ್ಳಿ ಸ.ಹಿ.ಪ್ರಾ ಶಾಲೆಯಲ್ಲಿ ಆನಗೋಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಪ್ರತಿಭಾ ಕಾರಂಜಿಯನ್ನು ಊರಿನ ಉತ್ಸವದಂತೆ ಎಲ್ಲರೂ ಒಟ್ಟಾಗಿ ಆಚರಿಸುವುದು ಸಂತಸದ ವಿಚಾರ ಎಂದರು.
ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀಧರ ಮಡಿವಾಳ ಅವರನ್ನು ಸನ್ಮಾನಿಸಲಾಯಿತು.
ದೇಹಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀಪತಿ ಮುದ್ದೆಪಾಲ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ ಉಪಾಧ್ಯಕ್ಷ ಮಂಜುನಾಥ ಗುಮ್ಮಾನಿ, ಸದಸ್ಯ ವಿಶ್ವನಾಥ ಹಳೆಮನೆ, ಆನಗೋಡ ಗ್ರಾ.ಪಂ ಅಧ್ಯಕ್ಷೆ ಮೀನಾಕ್ಷಿ ಭಟ್ಟ, ಬಿ.ಆರ್.ಸಿ ಸಂಯೋಜನಾಧಿಕಾರಿ ಶ್ರೀರಾಮ ಹೆಗಡೆ, ಶಿಕ್ಷಣ ಸಂಯೋಜಕ ಷಣ್ಮುಖ ಹೆಗಡೆ, ಬಿ.ಆರ್.ಪಿ ಸಂತೋಷ ಜಿಗಳೂರ, ಸಿ.ಆರ್.ಪಿ ಶ್ರೀನಿವಾಸ ಇತರರಿದ್ದರು. ಮುಖ್ಯಾಧ್ಯಾಪಕ ಕೆ.ಆರ್.ಪಡ್ತಿ, ಸಿ.ಆರ್.ಪಿ ಸಂಜೀವಕುಮಾರ ಹೊಸ್ಕೇರಿ, ಶಿಕ್ಷಕ ಚಂದ್ರಶೇಖರ ನಾಯ್ಕ ನಿರ್ವಹಿಸಿದರು. ಆನಗೋಡ ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.