ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಶ್ರಾವಣ ಸಂಭ್ರಮ

ದಾಂಡೇಲಿ : ನಗರದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಗರದ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಶ್ರಾವಣ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ ಅವರ ನೇತೃತ್ವದಲ್ಲಿ ನಡೆದ ಶ್ರಾವಣ ಸಂಭ್ರಮ ಕಾರ್ಯಕ್ರಮದಲ್ಲಿ ಅರಸಿನ ಕುಂಕುಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ಮೀನಾಕ್ಷಿ ಕನ್ಯಾಡಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.