ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬವನ್ನು ಆಚರಿಸುವ ಕುರಿತು ಹೊನ್ನಾವರ ಪಟ್ಟಣ ಪಂಚಾಯತ ಕಾರ್ಯಾಲಯದಿಂದ ಪ್ರಕಟಣೆ

ಹೊನ್ನಾವರ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬವನ್ನು ಆಚರಿಸುವ ಕುರಿತು ಹೊನ್ನಾವರ ಪಟ್ಟಣ ಪಂಚಾಯತ ಕಾರ್ಯಾಲಯದಿಂದ ಪ್ರಕಟಣೆ ಹೊರಡಿಸಲಾಗಿದೆ..ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬವನ್ನು ಆಚರಿಸುವ ಕುರಿತು ಹೊನ್ನಾವರ ಪಟ್ಟಣ ಪಂಚಾಯತ ಕಾರ್ಯಾಲಯದಿಂದ ಪ್ರಕಟಣೆ ಹೊರಡಿಲಾಗಿದೆ. ಪ್ರಕಟಣೆಯಲ್ಲಿ ತಿಳಿಸಿರುವಂತೆ, ಹೊನ್ನಾವರ ಪ.ಪಂ ವ್ಯಾಪ್ತಿಯಲ್ಲಿರುವ ಗಣೇಶ ಮೂರ್ತಿ ತಯಾರಕರು, ಮಾರಾಟಗಾರರು ಹಾಗೂ ಸಾರ್ವಜನಿಕ ಮತ್ತು ಮನೆಯಲ್ಲಿ ಗಣೇಶಮೂರ್ತಿ ಪ್ರತಿಸ್ಥಾಪಿಸುವವರು ಪ್ಲಾಸ್ಟರ್ ಆಪ್ ಪ್ಯಾರಿಸ್ ವಿಗ್ರಹಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದು ಕಾನೂನು ಬಾಹಿರ ಮತ್ತು ಅಕ್ಷಮ್ಯ ಅಪರಾಧವಾಗಿರುತ್ತದೆ..
ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಗೌರಿ-ಗಣೇಶ ವಿಗ್ರಹಗಳನ್ನು ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ತಯಾರಿಸಲು, ಮಾರಾಟ ಮಾಡಲು ಸೂಚಿಸಲಾಗಿದೆ ಹಾಗೇ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಗಳಲ್ಲಿ ಪ್ರತಿಸ್ಥಾಪಿಸಲು ಸೂಚಿಸಲಾಗಿದೆ. ಗೌರಿ-ಗಣೇಶ ಹಬ್ಬವನ್ನು ಪರಿಸಿರ ಸ್ನೇಹಿಯಾಗಿ ಆಚರಿಸಲು ಸಹಕರಿಸಿ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪ್ರವೀಣ್ ಕುಮಾರ್ ನಾಯಕ್ ತಿಳಿಸಿದ್ದಾರೆ….