4ನೇ ಓವರ್ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ (2) ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಎಲ್ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ಕೀಪರ್ ಕ್ಯಾಚ್ ಔಟ್ ನೀಡಿ ನಿರ್ಗಮಿಸಿದರು.
ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್ನಲ್ಲೇ ಜಸ್ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್.
4ನೇ ಓವರ್ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ (2) ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಎಲ್ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ಕೀಪರ್ ಕ್ಯಾಚ್ ಔಟ್ ನೀಡಿ ನಿರ್ಗಮಿಸಿದರು.
ಒಂದೇ ಓವರ್ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.
ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.
2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಸಿರಾಜ್ ಸರಿಗಟ್ಟಿದ್ದಾರೆ.
ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.ಮೊಹಮ್ಮದ್ ಸಿರಾಜ್ ಕೂಡ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ 5 ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿದ್ದಾರೆ.
ಅಲ್ಲದೆ ಚಾಮಿಂಡ ವಾಸ್ ಬಳಿಕ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ದಾಖಲೆಯನ್ನೂ ಕೂಡ ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ.
ಈ ಪಂದ್ಯದಲ್ಲಿ 7 ಓವರ್ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್ಗಳಿಗೆ ಆಲೌಟ್ ಆಯಿತು.