ಅಂಕೋಲಾ: ವಿಶ್ವ ಕಂಡ ಶ್ರೇಷ್ಠ ನಾಯಕ ಮತ್ತು ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ 73 ನೇ ಜನ್ಮದಿನದ ಪ್ರಯುಕ್ತ ತಾಲೂಕು ಬಿಜೆಪಿ ವತಿಯಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀ ಶಾಂತಾದುರ್ಗಾ ದೇವಸ್ಥಾನದಲ್ಲಿ ಮೋದಿ ಅವರಿಗೆ ದೀರ್ಘಾಯಸ್ಸು ಆರೋಗ್ಯ ಕರುಣಿಸಲಿ. ಜೊತೆಗೆ ದೇಶ ಸೇವೆ ಮಾಡಲು ಇನ್ನಷ್ಟು ಶಕ್ತಿ ನೀಡಲೆಂದು ಹಾಗೂ 2024 ರಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎಂದು ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು. ನಂತರ ತಾಲೂಕಾ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಬ್ರೆಡ್, ಹಾಲು, ಹಣ್ಣುಗಳನ್ನು ನೀಡಲಾಯಿತು. ನಗರ ಪ್ರದೇಶದಲ್ಲಿ ವೃಕ್ಷಾರೋಪಣ ಮಾಡುವ ಮೂಲಕ ಮೋದಿ ಹುಟ್ಟುಹಬ್ಬದ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಅಂಕೋಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಜಿಲ್ಲಾ ಸಹ ಸಂಚಾಲಕ, ಓಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ, ಮಂಡಲ ಅಧ್ಯಕ್ಷ ಸಂಜಯ ನಾಯ್ಕ,ಜಿಲ್ಲಾ ಎಸ್ ಸಿ ಮೋರ್ಚಾ ಪ್ರಭಾರಿ ಜಗದೀಶ ನಾಯಕ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಗ್ರಾ,ಪಂ ಅಧ್ಯಕ್ಷ ಚಂದ್ರಕಾಂತ ನಾಯ್ಕ ಮಂಡಲ ಪ್ರಧಾನ ಕಾರ್ಯದರ್ಶಿ ಮಾರುತಿ ಗೌಡ,ಉಪಾಧ್ಯಕ್ಷ ಗಣಪತಿ ನಾಯ್ಕ(ಸೂಪರ) ಪುರಸಭೆ ಸದಸ್ಯರಾದ ತಾರಾ ನಾಯ್ಕ, ಸುರಕ್ಷಾ ಭೋವಿ, ನಾಗರಾಜ ಐಗಳ, ಪ್ರವೀಣ್ ನಾಯ್ಕ ಇದ್ದರು.