ಹಳಿಯಾಳ : ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ನಾರಿಶಕ್ತಿ ವಂದನಾ ಮಸೂದೆಯನ್ನು ಮಂಡಿಸಿರುವುದಕ್ಕೆ ಬಿಜೆಪಿ ಪಕ್ಷದ ವತಿಯಿಂದ ಹಳಿಯಾಳ ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು
ಪಟ್ಟಣದ ಶಿವಾಜಿ ವೃತ್ತದಲ್ಲಿ ಮಾಜಿ ಶಾಸಕರಾದ ಸುನೀಲ್ ಹೆಗಡೆ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿ, ವಿಜಯೋತ್ಸವ ಆಚರಿಸಿದರು.
ಈ ವೇಳೆ ಮಾತನಾಡಿದ ಸುನೀಲ್ ಹೆಗಡೆಯವರು ಗಣೇಶ ಚತುರ್ಥಿಯ ಶುಭ ದಿನದಂದು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ನಾರಿ ಶಕ್ತಿ ವಂದನಾ ಅಧಿನಿಯಮ ಮಸೂದೆ ಮಂಡಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸ್ತ್ರೀ ಶಕ್ತಿಗೆ ಇನ್ನಷ್ಟು ಬಲ ತುಂಬುವ ಕೆಲಸ ಮಾಡಿದೆ. ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಶೇ 33% ರಷ್ಟು ಮೀಸಲು ಸಿಗಲಿದೆ. ಬಿಜೆಪಿ ಸರ್ಕಾರ ದೇಶದಲ್ಲಿ ಮಹಿಳೆಯರಿಗೆ ಎಲ್ಲರಿಗಿಂತ ಹೆಚ್ಚು ಗೌರವ ನೀಡುತ್ತಿರುವ ಸರ್ಕಾರವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷರಾದ ಗಣಪತಿ ಕರಂಜೇಕರ, ಪ್ರಧಾನ ಕಾರ್ಯದರ್ಶಿ ಅನಿಲ್ ಮುತ್ನಾಳೆ, ಪುರಸಭೆ ಸದಸ್ಯರಾದ ಉದಯ ಹೂಲಿ, ಸಂತೋಷ ಘಟಕಾಂಬಳೆ, ಚಂದ್ರಕಾಂತ ಕಮ್ಮಾರ, ಪ್ರಮುಖರಾದ ವಾಸುದೇವ ಪೂಜಾರಿ, ತಾನಾಜಿ ಪಟ್ಟೇಕರ, ವಿಲಾಸ ಯಡವಿ, ಯಲ್ಲಪ್ಪ ಹೊನ್ನೋಜಿ, ಆನಂದ ಕಂಚನಾಳಕರ, ಉಲ್ಲಾಸ ಬೀಡಿಕರ, ಉಮೇಶ ದೇಶಪಾಂಡೆ, ಕಿರಣ ಭಜಂತ್ರಿ, ಜಯಲಕ್ಷ್ಮೀ ಚವ್ಹಾಣ, ಮಾಲಾ ಹುಂಡೇಕರ, ಮೊದಲಾದವರು ಉಪಸ್ಥಿತರಿದ್ದರು.