ಜೋಯಿಡಾ : ಕಾರವಾರದಲ್ಲಿರುವ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಜೋಯಿಡಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿನಯ್ ದೇಸಾಯಿ ಅವರು ಭಾಗವಹಿಸಿ ತಾಲೂಕಿನ ಪ್ರವಾಸೋದ್ಯಮದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಪ್ರವಾಸೋದ್ಯಮ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಜೋಯಿಡಾ ತಾಲೂಕಿನ ಪ್ರವಾಸೋದ್ಯಮಕ್ಕೆ ಮತ್ತಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ವಿಶೇಷ ಕಾರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತೆ ವಿನಯ್ ದೇಸಾಯಿ ಅವರು ಮನವಿಯನ್ನು ಮಾಡಿದರು. ವಿನಯ್ ದೇಸಾಯಿ ಅವರ ಮನವಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಜೋಯಿಡಾ ತಾಲೂಕಿನ ಪ್ರವಾಸೋದ್ಯಮದ ಅಭಿವೃದ್ಧಿಯ ಕುರಿತು ವಿಶೇಷ ಸಭೆ ನಡೆಸುವುದಾಗಿ ತಿಳಿಸಿದರು.