ಕುಮಟಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ, 14 ವರ್ಷ ವಯೋಮಿತಿ ಪ್ರಾಥಮಿಕ ಶಾಲೆಗಳ ತಾಲೂಕ ಮಟ್ಟದ ಕ್ರೀಡಾಕೂಟವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದ್ರು…
ಕುಮಟಾದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ, 14 ವರ್ಷ ವಯೋಮಿತಿ ಪ್ರಾಥಮಿಕ ಶಾಲೆಗಳ ತಾಲೂಕ ಮಟ್ಟದ ಕ್ರೀಡಾಕೂಟವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದ್ಕ ವಲ ತರಗತಿಯೊಳಗೆ ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವದ ವಿಕಸನ ಸಾಧ್ಯವಿಲ್ಲ. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಾಗ ಮಾತ್ರ ಅದು ಸಾಧ್ಯ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿರಲು ಸಾಧ್ಯ. ಅಲ್ಲದೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ವೃದ್ಧಿಯಾಗಲು ಕೂಡ ಆಟಗಳು ಮುಖ್ಯ ಪಾತ್ರವಹಿಸುತ್ತವೆ. ಕೇವಲ ಬಹುಮಾನ ಗೆಲ್ಲುವುದನ್ನೇ ಮುಖ್ಯ ಗುರಿಯಾಗಿ ಇಟ್ಟುಕೊಳ್ಳದೆ, ಕ್ರೀಡಾ ಸ್ಫೂರ್ತಿಯೊಡನೆ ಆಟಗಳಲ್ಲಿ ಭಾಗವಹಿಸಿ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದ್ರು ಈ ವೇಳೆ ತಾ. ಪಂ. ಆಡಳಿತಧಿಕಾರಿ ಎನ್. ಜಿ. ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಎಲ್. ಭಟ್, ಪುರಸಭಾ ಸದಸ್ಯ ಸೂರ್ಯಕಾಂತ್ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ದೀಪಕ ನಾಯ್ಕ್, ಹಾಗೂ ವಿವಿಧ ಶಾಲೆಯ ಶಿಕ್ಷಕ ವೃಂದ, ಮಕ್ಕಳು ಇತರರು ಉಪಸ್ಥಿತರಿದ್ರು..