ಸಿದ್ದಾಪುರ : ತರಗತಿಗಳಲ್ಲಿ ಕಲಿಸಿದ ಹಾಗೂ ಇತರೆ ವಿಷಯಗಳನ್ನು ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ಚರ್ಚಿಸಬೇಕು ಇದರಿಂದ ಹೆಚ್ಚಿನ ಜ್ಞಾನ ಸಂಪಾದನೆ ಯಾಗುತ್ತದೆ ಎಂದು ಹಾಳದಕಟ್ಟ ಪಿ.ಯು ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸುರೇಂದ್ರ ದಫೆದರ್ ಹೇಳಿದರು ಅವರು ಪಟ್ಟಣ ವ್ಯಾಪ್ತಿಯ ಹಾಳದಕಟ್ಟಾ ಪಿ.ಯು ಕಾಲೇಜಿನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ಸಂಸತ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಇರಬೇಕು ಅಂಕಗಳಿಸುವುದು ಒಂದೇ ಉದ್ದೇಶ ಇರಬಾರದು ಅಂಕ ಗಳಿಕೆ ಜೊತೆ ಸಾಮಾಜಿಕ ಜ್ಞಾನವನ್ನ ಸಂಪಾದನೆ ಮಾಡುವ ಮೂಲಕ ಜೀವನದಲ್ಲಿ ಸಾಧನೆಯನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಬಿ ಎಸ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು, ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ 15 ವರ್ಷಗಳ ಕಾಲ ಇಂಗ್ಲಿಷ್ ಉಪನ್ಯಾಸಕ್ಕಾಗಿ ಸೇವೆ ಸಲ್ಲಿಸಿ ಬೇರೆಡೆ ವರ್ಗಾವಣೆಗೊಂಡ ಗೀತಾ ಹೆಗಡೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿ ಸಂಸತ್ತಿನ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು.