ಸಿದ್ದಾಪುರ : ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. ಆಡಳಿತ ಅಧಿಕಾರಿ ತಹಶೀಲ್ದಾರ್ ಎಮ್ ಆರ್ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯತ್ ಸದಸ್ಯರಾದ ನಂದನ್ ಬೋರ್ಕರ್, ಗುರುರಾಜ್ ಶಾನಭಾಗ್, ರವಿಕುಮಾರ್, ಸುಧೀರ್ ನಾಯ್ಕ್ ಮಾತನಾಡಿ ಪೌರಕಾರ್ಮಿಕರಿಗೆ ದಿನನಿತ್ಯ ನೂರಾರು ಸಮಸ್ಯೆಗಳು ಇದ್ದರೂ ಕೂಡ ಹಬ್ಬ ಹರಿದಿನಗಳನ್ನು ಬಿಟ್ಟು ನಗರವನ್ನ ಸ್ವಚ್ಛವಾಗಿರಲು ಪ್ರತಿನಿತ್ಯ ದುಡಿಯುತ್ತಿರುತ್ತಾರೆ ಇಂಥವರನ್ನ ಗೌರವಿಸಬೇಕಾಗಿದ್ದು ನಮ್ಮೆಲ್ಲರ ಕರ್ತವ್ಯ ಮತ್ತು ಸಾರ್ವಜನಿಕರು ಪೌರ ಕಾರ್ಮಿಕರಿಗೆ ಸಹಕಾರ ನೀಡಬೇಕು, ಪೌರ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಹೊಂದಿ ಉನ್ನತ ಸ್ಥಾನಮಾನ ಪಡೆದು ಸಾಧನೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಪೌರಕಾರ್ಮಿಕರನ್ನ ಸನ್ಮಾನಿಸಿ ಗೌರವಿಸಲಾಯಿತು.ಇದಕ್ಕೂ ಮೊದಲು ಅಧಿಕಾರಿಗಳು ಸಿಬ್ಬಂದಿಗಳು ಪೌರ ಕಾರ್ಮಿಕರು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಡೊಳ್ಳಿನ ಕುಣಿತದ ಮೂಲಕ ಮೆರವಣಿಗೆ ನಡೆಸಲಾಯಿತು



