ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಚೌತಿ ಸಂಭ್ರಮ

ದಾಂಡೇಲಿ : ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಚೌತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಇಲ್ಲಿ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಏಳು ದಿನಗಳವರೆಗೆ ಆಚರಣೆ ಮಾಡಲಾಗುತ್ತದೆ.

ಇಂದು ಭಾನುವಾರ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನ ಮಹಾಪೂಜೆಯಾದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಭೀಮಣ್ಣ ಎಂ ಸೂರಿ, ಪಿಎಸ್ಐ ಗಳಾದ ಕೃಷ್ಣ ಗೌಡ, ಜಗದೀಶ್, ಐ.ಆರ್ ಗಡ್ಡೇಕರ್, ಯಲ್ಲಪ್ಪ.ಎಸ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಪೊಲೀಸ್ ಕುಟುಂಬಸ್ಥರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ ಪೌರಾಯುಕ್ತರದ ಆರ್ ಎಸ್ ಪವಾರ್ ದಾಂಡೇಲಿ ನಗರಸಭೆಯ ಸದಸ್ಯರು, ಅಂಬೇವಾಡಿ, ಆಲೂರು, ಕೋಗಿಲ ಬನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು, ಮುಖಂಡರು, ಸಮಾಜಸೇವಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸ್ವಾಮಿಯ ಪ್ರಸಾದವನ್ನು ಸ್ವೀಕರಿಸಿದರು.