ತಹಶೀಲ್ದಾರ್ ರಾಜೇಶ್ ಚೌವ್ಹಾಣ್ ನಿಧನ

ಜೋಯಿಡಾ : ತಾಲ್ಲೂಕಿನ ತಹಶೀಲ್ದಾರ್ ರಾಜೇಶ್ ಚೌವ್ಹಾಣ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯಲ್ಲಿ ಇಂದು ಸೋಮವಾರ ವಿಧಿವಶರಾದರು. ಮೃತರಿಗೆ 50 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ತಿಂಗಳುಗಳಿಂದ ಜೋಯಿಡಾದ ತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯಗೊಂಡ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ರಜೆಯ ಮೇಲೆ ತೆರಳಿ, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸೋಮವಾರ ಸ್ವರ್ಗಸ್ಥರಾಗಿದ್ದಾರೆ.

ಮೃತರು ಬೆಳಗಾವಿ ಪಟ್ಟಣದ ಶಾಪುರ ನಿವಾಸಿಯಾಗಿದ್ದು, ಮೃತರು ಪತ್ನಿ ಓರ್ವ ಪುತ್ರ ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಜೋಯಿಡಾದ ಗಣ್ಯರನೇಕರು ಕಂಬನಿಯನ್ನು ಮಿಡಿದು, ಸಂತಾಪವನ್ನು ಸೂಚಿಸಿದ್ದಾರೆ.