ದಾಂಡೇಲಿ : ತಾಲೂಕಾಡಳಿತ, ನಗರ ಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಯೋಗದೊಂದಿಗೆ ದಾಂಡೇಲಿ ನಗರದ ಕೆ.ಸಿ ವೃತದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಇಂದು ಸೋಮವಾರ ಚಾಲನೆಯನ್ನು ನೀಡಲಾಯ್ತು.
ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ಸ್ವಚ್ಛತೆ ಇದ್ದಲ್ಲಿ ಆರೋಗ್ಯ. ಆರೋಗ್ಯವಂತ ಸಮಾಜದಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಸ್ವಚ್ಛತೆಯ ಕಡೆಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕೆಂದು ಕರೆ ನೀಡಿದರು. ಸ್ವಚ್ಛತೆಯ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸ್ವಚ್ಛತಾ ಅಭಿಯಾನದಲ್ಲಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ನಗರಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್, ನಗರಸಭೆಯ ನಿಕಟಪೂರ್ವ ಅಧ್ಯಕ್ಷೆ ಸರಸ್ವತಿ ರಜಪೂತ್, ನಗರಸಭಾ ಸದಸ್ಯರಾದ ಮಹಾದೇವ ಜಮಾದಾರ, ಪ್ರೀತಿ ನಾಯರ್ ಸುಧಾ ರಾಮಲಿಂಗ ಜಾಧವ್, ರುಹಿನಾ ಖತೀಬ್, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ, ನಗರ ಸಭೆಯ ಪರಿಸರ ಅಭಿಯಂತರರಾದ ಶುಭಂ ರಾಯ್ಕರ್ , ಆರೋಗ್ಯ ನಿರೀಕ್ಷಕ ವಿಲಾಸ್ ದೇವಕರ, ನಗರ ಸಭೆಯ ಅಧಿಕಾರಿಗಳಾದ ವಿ.ಎಸ್.ಕುಲಕರ್ಣಿ, ಮೈಕಲ್ ಫರ್ನಾಂಡಿಸ್, ಹಾಗೂ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ. ಆರ್ ಹೆಗಡೆ, ಕಾಂಗ್ರೆಸ್ ಮುಖಂಡರುಗಳಾದ ಆರ್.ಪಿ.ನಾಯ್ಕ, ಎಸ್.ಎಸ್.ಪೂಜಾರ್, ದಾದಾಪೀರ್ ನದೀಮುಲ್ಲಾ, ಬಸೀರ್ ಗಿರಿಯಾಳ, ವಿಜಯಕುಮಾರ್, ಕಿರಣ್ ಸಿಂಗ್ ರಜಪೂತ್, ಪೌರಕಾರ್ಮಿಕರು, ನಗರದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಭಾಗವಹಿಸಿದ್ದರು.