ಶಿವಾಜಿ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಹಳಿಯಾಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ ಇವರ ಸಂಯುಕ್ತ ಆಶ್ರಯದಡಿ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲಾ ವಿದ್ಯಾರ್ಥಿಗಳ ಇಲಾಖೆ ಕ್ರೀಡಾಕೂಟಕ್ಕೆ ಹಳಿಯಾಳ ಪಟ್ಟಣದಲ್ಲಿರುವ ಶಿವಾಜಿ ಕ್ರೀಡಾಂಗಣದಲ್ಲಿ ಇಂದು ಸೋಮವಾರ ಚಾಲನೆಯನ್ನು ನೀಡಲಾಯಿತು.

ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಶಾಸಕರಾದ ಆರ್.ವಿ.ದೇಶಪಾಂಡೆ ಅವರು ಮಕ್ಕಳ ವ್ಯಕ್ತಿತ್ವ ವಿಕಸನದ ಜೊತೆಗೆ ಸದೃಢ ಆರೋಗ್ಯ ನಿರ್ಮಾಣಕ್ಕೆ ಕ್ರೀಡೆ ಸಹಕಾರಿ. ಹಳಿಯಾಳ ತಾಲೂಕಿನ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಈ ಕ್ರೀಡಾಕೂಟ ಕ್ರೀಡಾ ಪ್ರತಿಭೆಗಳ ಉಜ್ವಲ ಭವಿಷ್ಯಕ್ಕೆ ಮುನ್ನುಡಿಯಾಗಲಿ ಎಂದು ಕ್ರೀಡಾಕೂಟಕ್ಕೆ ಶುಭವನ್ನು ಹಾರೈಸಿದರು.

ವೇದಿಕೆಯಲ್ಲಿ ಡಿಡಿಪಿಐ ಬಸವರಾಜ್ ಪಾರಿ, ತಹಶೀಲ್ದಾರ್ ಜಿ.ಕೆ.ರತ್ನಾಕರ್, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಪ್ರಕಾಶ್ ಕಾರಿಕೊಪ್ಪ, ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಶುರಾಮ್ ಗಸ್ತೆ, ಶಿವಾಜಿ ಪದವಿಪೂರ್ವ ಮಹಾವಿದ್ಯಾಲಯದ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ಸತ್ಯಜಿತ್ ಗಿರಿ, ಪ್ರಮುಖರಾದ ಸುಭಾಷ್ ಕೊರ್ವೇಕರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಅಜಯ್ ನಾಯ್ಕ, ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ನಾರಾಯಣ ನಾಯ್ಕ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿವೇಕ್ ಕವರಿ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಾಕೀರ್ ಹುಸೇನ್ ಜಂಗೂಬಾಯಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸತೀಶ್ ನಾಯಕ ಬಾವಿಕೇರಿ, ಹಳಿಯಾಳ ತಾಲೂಕು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಪ್ರಶಾಂತ್ ನಾಯ್ಕ, ದಾಂಡೇಲಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ವಾಣೇಶ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಡಿಡಿಪಿಐ ಬಸವರಾಜ್ ಪಾರಿ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ ವಂದಿಸಿದರು ಶಿಕ್ಷಕರಾದ ಜನಾರ್ದನ ಮಡಿವಾಳ್ ಮತ್ತು ಆಶಾ ದೇಶಭಂಡಾರಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.