ಹೊನ್ನಾವರ: ಜಿ.ಪಂ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ ಉತ್ತರ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವತಿಯಿಂದ ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ವಿಷ್ಣು ಶಾಸ್ತ್ರಿ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಿತು. ಉಪ್ಪೋಣಿ ಗ್ರಾಪಂ ಅದ್ಯಕ್ಷ ಗಣೇಶ ನಾಯ್ಕ ಕ್ರೀಡಾಜ್ಯೋತಿ ಅನಾವರಣಗೊಳಿಸಿ ಕ್ರೀಡಾಕೂಟವು ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರಿಡಾಕೂಟವನ್ನು ಶಿಕ್ಷಕರು ಮತ್ತು ಅಧಿಕಾರಿಗಳು ಅತ್ಯಂತ ಕಾಳಜಿಯಿಂದ ಶ್ರಮಿಸುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಸಹಕಾರದ ಅಗತ್ಯವಿದೆ ಎಂದರು. ಕ್ರೀಡಾ ಧ್ವಜಾರೋಹಣ ನೆರವೇರಿಸಿ,ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಖರ್ವಾ ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀಧರ ನಾಯ್ಕ ಮಾತನಾಡಿ,ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮವಾಗಿ ಆಟವಾಡಿ,ಕ್ರೀಡೆಯಲ್ಲಿ ಸೋಲು-ಗೆಲುವು ಇದ್ದೆ ಇದೆ. ಎರಡನ್ನು ಸಮಾನವಾಗಿ ಸ್ವೀಕರಿಸಿ,ಇದು ಜೀವನದ ಸಾಧನೆಗೆ ಇದು ಪ್ರೇರಣೆ ಆಗಲಿ.ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಿರುವಂತೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಕ್ರೀಡಾಪಟುಗಳಿಗೆ ಧೈರ್ಯ ತುಂಬಿದರು.
ಈ ಕಾರ್ಯಕ್ರಮಕ್ಕೆ ಅಂದಾಜು ಒಂದುವರೆ ಲಕ್ಷಕ್ಕು ಅಧಿಕ ಖರ್ಚಾಗಲಿದೆ.70ಸಾವಿರದಷ್ಟು ಹಣವನ್ನು ಶಿಕ್ಷಕರೆ ದೇಣಿಗೆಯಾಗಿ ನೀಡಿದ್ದಾರೆ.ಅವರಿಗೆ ಇಲಾಖೆ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಹೇಳಿದರು.ಜೀವನದಲ್ಲಿ ಯಶಸ್ಸು ಕಾಣಲು ಮೊದಲು ನಮ್ಮ ಮೇಲೆ ನಮಗೆ ನಂಬಿಕೆ ಇರಬೇಕು.ಜೊತೆಗೆ ಪರಿಶ್ರಮ ಅಗತ್ಯ.ಕ್ರೀಡಾ ಕಾರ್ಯಕ್ರಮ ಯಶ್ವಸಿಯಾಗಲು ವಿದ್ಯಾರ್ಥಿಗಳ ಭಾಗವಹಿಸುವಹಿಕೆಯಿಂದ ಮಾತ್ರ ಸಾಧ್ಯ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರನ್ನು ಆದರ್ಶರಾಗಿಟ್ಟುಕೊಂಡು ಗುರಿ ತಲುಪಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇದೆ ವೇಳೆ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಲಿರುವ ಶ್ರೀ ಸಿದ್ದಿವಿನಾಯಕ ಪ್ರೌಢಶಾಲೆಯ ಶಿಕ್ಷಕ ರಮೇಶ್ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಬು ನಾಯ್ಕ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಯುವಜನಕ್ರೀಡಾಧಿಕಾರಿ ಸುಧೀಶ ನಾಯ್ಕ,ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಸಾಧನಾ ಬರ್ಗಿ, ಕೆ.ಎಂ.ಹೆಗಡೆ, ಸುರೇಶ ನಾಯ್ಕ, ಪ್ರತಿಮಾ ಹೆಗಡೆ, ಗಜಾನನ ನಾಯ್ಕ,ಪ್ರಮೋದ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.