ಭಟ್ಕಳದಲ್ಲಿ ಭಾರೀ ಮಳೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಟ್ಕಳ: ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 02-08-2022ರಂದು ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿ ಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.