ಹಳಿಯಾಳ : ಪಟ್ಟಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ್ ಮತ್ತು ಪುರಸಭೆ ಆಶ್ರಯದಡಿ ವಿವಿಧ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪಟ್ಟಣದ ಹೊರಗಿನ ಗುತ್ತಿಗೇರಿ ಕೆರೆ ಪ್ರದೇಶ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನವು ಬಾನುವಾರ ಜರುಗಿತು.
ಹಳಿಯಾಳ ಪಟ್ಟಣದ ಹೊರಗಿನ ಗುತ್ತಿಗೇರಿ ಕೆರೆ ಪ್ರದೇಶ ವ್ಯಾಪ್ತಿ ಮತ್ರು ಸುತ್ತಮುತ್ತಲು ಸ್ವಚ್ಛತಾ ಸ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು. ತಹಶೀಲ್ದಾರ್ ಕಾರ್ಯಾಲಯ, ತಾಲೂಕು ಪಂಚಾಯತ್ ಕಾರ್ಯಾಲಯ, ಪುರಸಭೆ, ಹೆಸ್ಕಾಂ, ಲೋಕಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು.