ದಾಂಡೇಲಿ : ತಾಲ್ಲೂಕಾಡಳಿತ ಮತ್ತು ನಗರ ಸಭೆಯ ಆಶ್ರಯದಡಿ ದಾಂಡೇಲಿಯ ಗಣೆಶನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮಕ್ಕೆ ಇಂದು ಸೋಮವಾರ ಚಾಲನೆಯನ್ನು ನೀಡಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರು ಶಾಸ್ತ್ರೀಯವರ ಭಾವಚಿತ್ರಕ್ಕೆ ಆರತಿ ಬೆಳಗಿ, ಪುಷ್ಪ ಗೌರವವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ಸಿಪಿಐ ಭೀಮಣ್ಣ.ಎಂ.ಸೂರಿ, ಪಿಎಸ್ಐ ಐ.ಆರ್.ಗಡ್ಡೇಕರ, ನಗರಸಭೆಯ ನಿಕಟ ಪೂರ್ವ ಅಧ್ಯಕ್ಷೆ ಸರಸ್ವತಿ ರಜಪೂತ್, ನಿಕಟಪೂರ್ವ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ನಗರ ಸಭಾ ಸದಸ್ಯರಾದ ಯಾಸ್ಮಿನ್ ಕಿತ್ತೂರ್, ಮಜಿದ್ ಸನದಿ, ಬುದ್ಧಿವಂತ ಗೌಡ ಪಾಟೀಲ್, ದಶರಥ ಬಂಡಿವಡ್ಡರ, ವಿಜಯ್ ಕೊಲೇಕರ್, ಮಹಾದೇವ ಜಮಾದಾರ್, ರಮಾದೇವಿ, ಸುಧಾ ರಾಮಲಿಂಗ ಜಾಧವ್, ಸುಗಂಧ ಕಾಂಬಳೆ, ರುಹಿನಾ ಖತೀಬ್ ಸೇರಿದಂತೆ ನಗರ ಸಭೆ, ತಹಶೀಲ್ದಾರ್ ಕಾರ್ಯಾಲಯ, ಆರ್.ಟಿ.ಓ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಆನಂತರ ಗಣೇಶನಗರ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಪದಾಧಿಕಾರಿಗಳು,