ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಂಡಕ್ಕೆ ಬಿದ್ದ ಕಾರು : ಕಾರಿನ ಮುಂಭಾಗ ಸಂಪೂರ್ಣ ಜಖಂ

ದಾಂಡೇಲಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಗಿಳಿದು ರಸ್ತೆ ಪಕ್ಕದ ಹೊಂಡಕ್ಕೆ ಬಿದ್ದ ಘಟನೆ ಸೋಮವಾರ ದಾಂಡೇಲಿ ನಗರದ ಸಮೀಪದಲ್ಲಿರುವ ಮೋಹಿನಿ ವೃತ್ತದ ಹತ್ತಿರ ನಡೆದಿದೆ.

ಕೆಎ :22, ಪಿ: 2364 ಸಂಖ್ಯೆಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಈ ಸಂದರ್ಭದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ.