ಜೋಯಿಡಾ : 2022 – 23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಜೋಯಿಡಾ ತಾಲ್ಲೂಕಿನ ಗಾಂಗೋಡಾ ಗ್ರಾ.ಪಂ’ಗೆ ಇಂದು ಸೋಮವಾರ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಭವನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆಯವರಿಂದ ಗಾಂಗೋಡಾ ಗ್ರಾ.ಪಂ ಅಧ್ಯಕ್ಷ ಪ್ರವೀಣ್ ದೇಸಾಯಿ, ಉಪಾಧ್ಯಕ್ಷೆ ನೀತಾ ಗೌಳಿ ಹಾಗೂ ಗ್ರಾ.ಪಂ ಅಭಿೃವೃದ್ಧಿ ಅಧಿಕಾರಿ ನಬೀಲಾಲ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.