ಖರ್ವಾ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಯಿತು.

ಹೊನ್ನಾವರ: ತಾಲೂಕಿನ ಖರ್ವಾ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ
ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಿಸಲಾಯಿತು.ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು‌.ನಂತರ ಶಾಲಾ ಮುಖ್ಯಾದ್ಯಾಪಕಿ ಸುಧಾಭಂಡಾರಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸ್ವಚ್ಚತೆ ಪರಿಕಲ್ಪನೆಯೊಂದಿಗೆ ಕಾರ್ಯಕ್ರಮ ನಡೆಸಲಾಗಿದೆ ಎಂದರು.

ವಿದ್ಯಾರ್ಥಿಗಳು ಬಾಪೂಜಿಯವರ ನೆಚ್ಚಿನ ‘ರಘುಪತಿ ರಾಘವ ರಾಜಾರಾಮ್
ಪತಿತ ಪಾವನ ಸೀತಾರಾಮ್’ ಭಜನೆಯನ್ನು ಹಾಡಿದರು. , ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಕುರಿತಾದ ಚುಟುಕು ಭಾಷಣ ನಡೆಯಿತು.

ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ವೆಂಕಟೇಶ ನಾಯ್ಕ,ಉಪಾಧ್ಯಕ್ಷೆ ಚೇತನಾ ನಾಯ್ಕ, ಶಿಕ್ಷಕ ವಿನಾಯಕ ಭಟ್ ,ಶಿಕ್ಷಕಿಯರಾದ ಸುನೀತಾ ಪಟಗಾರ, ರೇಷ್ಮಾ ಅಂಬಿಗ,ಎಸ್‌ಡಿಎಂಸಿ ಸದಸ್ಯರು, ಪೋಷಕರು, ಅಕ್ಷರದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.ಸಭಾ ಕಾರ್ಯಕ್ರಮ ಪೂರ್ವದಲ್ಲಿ ವಿದ್ಯಾರ್ಥಿಗಳಿಂದ ಶಾಲಾ ವರ್ಗ ಕೊಠಡಿ,ಅಡುಗೆ ಕೋಣೆ, ಶಾಲಾ ಆವರಣದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.