ಸಿದ್ದಾಪುರ : ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆ ಡಿ ಪಿ ನಡೆಸಿದರು. ವಿವಿಧ ಇಲಾಖೆ ಅಧಿಕಾರಿಗಳಿಂದ ಇಲಾಖೆ ಪ್ರಗತಿ ಕುರಿತು ಮಾಹಿತಿ ಪಡೆದ ಅವರು ಸಾರ್ವಜನಿಕರಿಗೆ ರೈತರಿಗೆ ತೊಂದರೆಯಾಗದ ರೀತಿಯಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಆರೋಗ್ಯ, ಕೃಷಿ ಅಬಕಾರಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ಆರೋಪದ ಮಾತುಗಳು ಕೇಳಿ ಬಂದವು. ಹೆರಿಗೆ ರೋಗಿಗಳಿಂದ ಲಂಚ ಪಡೆಯುತ್ತಿರುವುದು,ಕೃಷಿ ಸಂಬಂಧಿಸಿದಂತೆ ಕಳಪೆ ಗೊಬ್ಬರ ಪೂರೈಕೆ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಹೋಗದೆ ಪಾಠವನ್ನು ಮಾಡಿದೆ ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ಆಗುತ್ತಿರುವ ಬಗ್ಗೆ ಮತ್ತು ಸರಾಯಿ ಅಕ್ರಮ ಮಾರಾಟದಿಂದ ಸಾರ್ವಜನಿಕರು ಆಗುತ್ತಿರುವ ತೊಂದರೆ ಬಗ್ಗೆ ಸಭೆಗೆ ತಿಳಿಸಿದರು ಅಡಿಕೆಗೆ ಬಾಧಿಸಿರುವ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು ಶಾಸಕ ಭೀಮಣ್ಣನ ಈ ಸಂದರ್ಭದಲ್ಲಿ ಸಾರ್ವಜನಿಕರು ಆರೋಪಿಸಿದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮುಂದಿನ ದಿನಗಳಲ್ಲಿ ಈ ರೀತಿ ಸಾರ್ವಜನಿಕರಿಂದ ಆರೋಪಗಳು ಬರದಂತೆ ನೋಡಿಕೊಳ್ಳಬೇಕು ಎಂದು ಖಡಕ್ ಸೂಚನೆ. ನೀಡಿದರು.