ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಇಂದು ಕುಮಟಾದ ಪುರಸಭಾ ಕಾರ್ಯಾಲಯಕ್ಕೆ ಭೇಟಿನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು ಅವಲೋಕನ ಮಾಡಿದರು. ಪಟ್ಟಣದಲ್ಲಿ ನೈರ್ಮಲ್ಯ ಸೇರಿದಂತೆ ವಿವಿಧ ಕೆಲಸಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಹಾಗೂ ಸಾರ್ವಜನಿಕರಿಗೆ ವಿಳಂಬಮಾಡದೆ ಸೇವೆ ಒದಗಿಸುವಂತೆ ಸೂಚಿಸಿದರು. ವಿವಿಧ ಕೆಲಸಗಳ ನಿಮಿತ್ತ ಕಾರ್ಯಾಲಯಕ್ಕೆ ಆಗಮಿಸಿದ್ದ ಸಾರ್ವಜನಿಕರನ್ನು ಮಾತನಾಡಿಸಿ ಪುರಸಭೆಯ ಸಿಬ್ಬಂದಿಗಳ ಕಾರ್ಯವೈಖರಿಯ ಕುರಿತು ಮಾಹಿತಿ ಪಡೆದರು.
ಪುರಸಭಾ ಮುಖ್ಯಾಧಿಕಾರಿ ವಿದ್ಯಾಧರ ಕಲಾದಾಗಿ, ಸ್ಥಾಯಿಸಮಿತಿ ಅಧ್ಯಕ್ಷ ಕಿರಣ ಅಂಬಿಗ, ಸದಸ್ಯರಾದ ಟೋನಿ ರೊಡ್ರಿಗಿಸ್, ತುಳಸು ಗೌಡ ಈ ಸಂದರ್ಭದಲ್ಲಿ ಇದ್ದರು.