ಹಳಿಯಾಳ : ಗ್ರಾಮೀಣ ಮಹಿಳೆಯರು ಸೇರಿದಂತೆ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕರಾದ ಆರ್.ವಿ.ದೇಶಪಾಂಡೆಯವರು ಹೇಳಿದರು.
ಅವರು ಇಂದು ಬುಧವಾರ ಹಳಿಯಾಳ ಪಟ್ಟಣದ ಡೊರ್ ಕಕ್ಕಯ್ಯ ಸಭಾಭವನದಲ್ಲಿ ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2021-22ನೇ ಸಾಲಿನ ಕ್ರಿಯಾ ಯೋಜನೆಯ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯಗಳಿಕೆಗಾಗಿ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಹೊಲಿಗೆಯಂತ್ರಗಳನ್ನು ವಿತರಿಸಿ ಮಾತನಾಡುತ್ತಿದ್ದರು. ಮಹಿಳೆಯರು ಸ್ವ ಉದ್ಯೋಗ ಚಟುವಟಿಕೆ ಮೂಲಕ ಆರ್ಥಿಕ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ನೀಡಬೇಕೆಂದು ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರು, ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಇದರ ಅಧಿಕಾರಿಗಳು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.