ಹಳಿಯಾಳ : ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಕಾರವಾರ, ತಾಲ್ಲೂಕು ಪಂಚಾಯತ್ ಹಳಿಯಾಳ, ಕೃಷಿ ಇಲಾಖೆ ಹಳಿಯಾಳ ಮತ್ತು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ಹಳಿಯಾಳ ಹಾಗೂ ಐ.ಸಿ. ಎ. ಆರ್ ಕೃಷಿ ವಿಜ್ಞಾನ ಕೇಂದ್ರಉತ್ತರ ಕನ್ನಡ ಶಿರಸಿ ಇವರ ಸಹಯೋಗದಲ್ಲಿ 2023 – 2024 ನೇ ಸಾಲಿನಲ್ಲಿ ಕೃಷಿ ಪರಿಕರಗಳು ಮತ್ತು ಗುಣ ಮಟ್ಟ ನಿಯಂತ್ರಣ ಯೋಜನೆಯಡಿ ಬೀಜೋಪಚಾರ ಮತ್ತು ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ತಾಲೂಕಿನ ಬೆಳವಟಗಿಯಲ್ಲಿ ಹಮ್ಮಿಕೊಳ್ಳಲಾಯ್ತು.
ಕಾರ್ಯಕ್ರಮವನ್ನು ಊರಿನ ಹಿರಿಯ ರೈತರಾದ ಚನ್ನಬಸಪ್ಪ ಕುರುಬಗಟ್ಟಿ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೃಷಿ ಅಧಿಕಾರಿ ಟಿ. ಎಸ್. ಚಿಕ್ಕಮಠ ಅವರು ಭಾಗವಹಿಸಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೃಷಿ ವಿಜ್ಞಾನ ಕೇಂದ್ರ ಶಿರಸಿಯ ಸತೀಶ ಗುನಗ ಅವರು ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಬೀಜೋಪಚಾರ ಮತ್ತು ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತು ಮಾಹಿತಿ ನೀಡಿದರು.ಮುಖ್ಯ ಅತಿಥಿಗಳಾಗಿ ತಾಲ್ಲೂಕ ತಾಂತ್ರಿಕ ವ್ಯವಸ್ಥಾಪಕರಾದ
ಎಸ್. ಸಿ. ಸುಧಾಕರ್, ಗ್ರಾ.ಪಂ ಸದಸ್ಯರಾದ ಮಂಜುನಾಥ ಭಡಂಗಿ, ಪ್ರಮುಖರಾದ ಸಂಜು ಮಿಸಾಳಿ, ಕೃಷ್ಣ ಮಾಳ್ವಿ ಮೊದಲಾದವರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ಹಳಿಯಾಳ ಇಲ್ಲಿಯ ಯೋಜನಾಧಿಕಾರಿ ಸಂತೋಷ ಪರೀಟ್, ಕ್ಷೇತ್ರ ಮೇಲ್ವಿಚಾರಕರಾದ ಉಳವಯ್ಯ ಬೆಂಡಿಗೇರಿ ಅವರು ಸಂಘಟಿಸಿದ್ದರು. ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ರೈತರು ಮತ್ತು ಮಹಿಳೆಯರು ಭಾಗವಹಿಸಿದ್ದರು.