ಸಿಇಟಿ ರಿಪೀಟರ್ಸ್ ಫಲಿತಾಂಶದಲ್ಲಿ ಅನ್ಯಾಯ: ಕೆಇಎ ಬೋರ್ಡ್ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ: ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ಸಿಇಟಿ ರಿಪೀಟರ್ಸ್ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಕೆಇಎ ಬೋರ್ಡ್ ಮುಂದೆ ನೂರಕ್ಕೂ ಹೆಚ್ಚು ಪೋಲಿಸರು ನಿಯೋಜನೆ ಮಾಡಲಾಗಿದೆ.

ಸಿಇಟಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಫಲಿತಾಂಶದಲ್ಲಿ ಅನ್ಯಾಯವಾಗಿದೆ ಅಂತ ಆರೋಪಿಸಿ ನಿನ್ನೆ ದೊಡ್ಡ ಮಟ್ಟದಲ್ಲಿ ಕೆಇಎ ಬೋರ್ಡ್ ಮುಂದೆ ಪ್ರತಿಭಟನೆ ನಡೆದಿತ್ತು. ಇಂದೂ ಸಹ ವಿದ್ಯಾರ್ಥಿಗಳ ಹಾಗೂ ಪೋಷಕರ ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.1 ಕೆಎಸ್ ಆರ್ ಪಿ ವಾಹನ, 2 ಬಿಎಂಟಿಸಿ ಬಸ್‌ಗಳಲ್ಲಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ.